August 30, 2025
WhatsApp Image 2025-06-03 at 11.28.12 PM
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂ. 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ.ಅಲ್ಲದೇ ದಿನಾಂಕ 03-06-2025 ರಂದು ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ, ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಟ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಹಾಜರಿದ್ದವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಸಹ ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ.

About The Author

Leave a Reply