February 12, 2026
WhatsApp Image 2025-06-04 at 4.58.03 AM

ಮಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು‌ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಲ್ಯಾಂಡ್ ಲೈನ್ ಗೆ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ.

ಬೆದರಿಕೆ ಕರೆಯ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ‌. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೊಬೈಲ್ ನಂಬರ್ ಪರಿಶೀಲಿಸಿ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

 

About The Author

Leave a Reply