August 30, 2025
II PU exam centre Mysuru 2025

ಮಂಗಳೂರು: ಜೂನ್ 9 ರಿಂದ ಜೂನ್ 20 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ- 3 ನಡೆಯಲಿದ್ದು, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಜೂನ್ 9 ರಿಂದ ಜೂನ್ 20 ರವರೆಗೆ ಪರೀಕ್ಷೆ- 3 ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪುತ್ತೂರು ತಾಲೂಕಿನ ದರ್ಬೆ ಸೈಂಟ್ ಫಿಲೋಮಿನಾ ಪಿ.ಯು ಕಾಲೇಜು, ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ತಾಲೂಕಿನ ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ತಾಲೂಕಿನ ಬಿ ಮೂಡಾ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಆದೇಶಿಸಿದ್ದಾರೆ.

About The Author

Leave a Reply