August 30, 2025
WhatsApp Image 2025-06-05 at 2.27.11 AM

ಕಡಬ: ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ಪೊಲೀಸರು ರಾತ್ರಿ ವೇಳೆ ಮನೆಗೆ ಪ್ರವೇಶಿಸಿ ಜಿಪಿಎಸ್ ಫೋಟೋ ತೆಗೆದಿರುವುದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮುಖಂಡರ ಮೇಲೆ ಸ್ವಯಂಪ್ರೇರಿತ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಬುಧವಾರ ಸಂಜೆ ಕಡಬ ಪೊಲೀಸ್ ಠಾಣೆಯ ಎದರು ಸಂಘ ಪರಿವಾರದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಲ್ಲಿ ಭಾಗವಹಿಸಿದ್ದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣ ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ನವೀನ್‌ ವಿರುದ್ದ ಜೂನ್‌ 4 ರಂದು ಕಡಬ ಪೊಲೀಸ್‌‌ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

About The Author

Leave a Reply