November 29, 2025
What-Is-A-Stay-Order

ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಶುಕ್ರವಾರ ಜಾಮೀನು ಆಗಿದೆ.

ಪ್ರಕರಣದ 18ನೆ ಆರೋಪಿ ಆದರ್ಶ್ ಎಂಬಾತನಿಗೆ ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

ಮೇ 31ರಂದು ಆರೋಪಿಗಳಾದ ರಾಹುಲ್ ಮತ್ತು ಕೆ.ಸುಶಾಂತ್ ಎಂಬವರಿಗೆ ಜಾಮೀನು ಲಭಿಸಿತ್ತು. ಜೂ.4ರಂದು ಸಂದೀಪ್, ದೀಕ್ಷಿತ್, ಸಚಿನ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 16 ಮಂದಿಯನ್ನು ಬಂಧಿಸಿದ್ದರು. ಆ ಪೈಕಿ ಈವರೆಗೆ 6 ಮಂದಿಗೆ ಜಾಮೀನು ಲಭಿಸಿದೆ. ಮೂವರ ಜಾಮೀನು ಅರ್ಜಿ ತಿರಸ್ಕೃತಗೊಂಡಿವೆ. ಉಳಿದ 7 ಮಂದಿ ಆರೋಪಿಗಳ ಅರ್ಜಿಯು ಸೋಮವಾರ ವಿಚಾರಣೆಗೆ ಬರಲಿದೆ ಎಂದು ತಿಳಿದು ಬಂದಿದೆ.

ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ, ದೂರಿನಲ್ಲಿದ್ದ ವ್ಯತ್ಯಾಸಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿವೆ ಎಂದು ಹೇಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇನ್‌ಸ್ಪೆಕ್ಟರ್ ಸಹಿತ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿತ್ತು.

About The Author

Leave a Reply