February 12, 2026
thmb-2025-06-07T111234.073

ಬಂಟ್ವಾಳ ಜೂನ್ 07: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಸಂಭವಿಸಿದೆ.

ಮೃತರನ್ನು ಅಮೆಮ್ಮಾರ್ ನಿವಾಸಿ ಝಾಹಿದ್ (28) ಎಂದು ಗುರುತಿಸಲಾಗಿದೆ. ಅವರು ಶಾಲೆಗೆ ತೆರಳುವ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಆಗಮಿಸಿದ ಬಸ್ ಢಿಕ್ಕಿ ಹೊಡೆಯಿತು. ಘಟನೆಯಲ್ಲಿ ಝಾಹೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಟೋ ಚಾಲಕನಾಗಿ ದುಡಿಯುತ್ತಿದ್ದ ಝಾಹಿದ್ ತಾಯಿ, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply