October 13, 2025
WhatsApp Image 2025-06-10 at 2.54.23 AM
ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತ ದುರ್ದೈವಿಗಳು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ತಂದೆ ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ಕೂಡಲೇ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಕ್ಕಳಿಬ್ಬರು ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದರು. ಹಾಗೂ ಯಾದವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಬೆಂಕಿ ಅವಘಡ ವೇಳೆ ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯಾದವ್ ಪತ್ನಿ ಹಾಗೂ ಹಿರಿಯ ಮಗನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಾರ್ಟ್‌ಮೆಂಟ್‌ನಲ್ಲಿದ್ದ ಎಲ್ಲಾ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ಅಪಾಯ ತಡೆಗಟ್ಟುವ ಸಲುವಾಗಿ ವಿದ್ಯುತ್ ಹಾಗೂ ಗ್ಯಾಸ್ ಕನೆಕ್ಷನ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply