October 12, 2025
thmb-2025-06-10T154819.272

ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ ದಾಖಲಾಗಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಈತನ ಸಹೋದರ ನಿಂಗಪ್ಪ (21) ಕೃತ್ಯ ಎಸಗಿದ ಆರೋಪಿ. ಮೊದಲು ಕಡಬ ಪೊಲೀಸರ ವಶದಲ್ಲಿದ್ದ ಈತನನ್ನು ಜೂನ್ 8 ರಾತ್ರಿ ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ವಶಕ್ಕೆ ಪಡೆದು ಬಂಧಿಸಿದ್ದರು.

ಇನ್ನು ತನಿಖೆ ವೇಳೆ ಕೊಲೆಗೆ ಕಾರಣವನ್ನು ತಮ್ಮ ತಿಳಿಸಿದ್ದು, ಅಣ್ಣನಿಗೆ ವಿಪರೀತ ಕುಡಿತದ ಚಟವಿತ್ತು. ಆತನ ಕಾಟದಿಂದಲೇ 14 ವರ್ಷಗಳ ಹಿಂದೆ ಆತನ ಹೆಂಡತಿ ಮನೆ ಬಿಟ್ಟು ಹೋಗಿದ್ದಳು. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಯತ್ನಿಸಿದ್ದ. ಇಂದು ನನ್ನ ಜೊತೆಯೂ ಗಲಾಟೆ ಮಾಡಿದ್ದಾನೆ. ಈ ಎಲ್ಲಾ ಹಿಂಸೆಯಿಂದ ನಾವು ರೋಸಿ ಹೋಗಿ ಅವನನ್ನು ಕೊಲೆ ಮಾಡಲು ನಿರ್ಧರಿಸಿದ್ದೆವು” ಎಂದು ನಿಂಗಪ್ಪ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.

About The Author

Leave a Reply