August 30, 2025
WhatsApp Image 2025-06-10 at 11.49.38 PM

ಮಂಗಳೂರು : ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡದಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಸಾದ್ಯತೆ ಇದೆ.ಜೂನ್ 14ರವರೆಗೆ ಮಳೆ ಅಲರ್ಟ್ ನೀಡಲಾಗಿದೆ.

ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

About The Author

Leave a Reply