November 8, 2025
aiease_1749789762741

ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ.

ಮೃತ ಬಾಲಕಿಯನ್ನು ಯೆನೆಪೋಯ ವೈದ್ಯಕೀಯ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೈದ್ಯ ದಂಪತಿ ಡಾ. ಮಮ್ತಾಝ್ ಅಹ್ಮದ್ ಮತ್ತು ಡಾ. ಕಮ್ರಾ ಜ್ ದಂಪತಿ ಪುತ್ರಿ ಹಿಬಾ ಐಮನ್ (15) ಎಂದು ಗುರುತಿಸಲಾಗಿದೆ.

18ನೇ ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12 ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು. ರಾತ್ರಿ ವೈದ್ಯ ದಂಪತಿಗಳಿಬ್ಬರು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಯಲ್ಲಿ ಕಾರ್ಯನಿರ್ವಹಿಸುತಿದ್ದು, ಹಿಬಾ ಬಾಲ್ಕನಿಯಲ್ಲಿ ಸ್ಟೂಲ್ ಇಟ್ಟು ಬೆಡ್ ಶೀಟ್ ಒಣಗಿಸಲು ಯತ್ನಿಸುತ್ತಿದ್ದಾಗ ಮೇಲಿಂದ ಕೆಳ ಬಿದ್ದು ಸಾವನ್ನಪ್ಪಿದ್ದಾಳೆ. ಯೆನೆಪೋಯ ಶಾಲೆಯಲ್ಲಿ 10ನೇ ತರಗತಿಯಲ್ಲಿ ಹಿಬಾ ವಿದ್ಯಾರ್ಥಿನಿಯಾಗಿದ್ದಳು. ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ. ಉಳ್ಳಾಲ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply