August 30, 2025
WhatsApp Image 2025-06-18 at 9.08.03 AM

ಮಂಗಳೂರು : ಮಕ್ಕಳ ನೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್‌.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಹಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿಯಾಗಿ ನೇಮಿಸಲಾಗಿದೆ.

ಮುಲ್ಲೈ ಮುಹಿಲನ್ ಅವರ ಅವಧಿಯಲ್ಲಿ ಮಕ್ಕಳಿಗೆ ಮಳೆಗಾಗಿ ಅತೀ ಹೆಚ್ಚು ರಜೆ ಸಿಕ್ಕಿದ್ದರಿಂದ ಮುಲ್ಲೈ ಮುಹಿಲನ್ ಅವರು ಮಕ್ಕಳಿಗೆ ನೆಚ್ಚಿನ ಡಿಸಿಯಾಗಿದ್ದರು.

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.

About The Author

Leave a Reply