October 13, 2025
WhatsApp Image 2025-06-18 at 10.45.59 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಜಿಮ್ಮಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಸಾವನ್ನಪ್ಪಿದವರು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ತಿಳಿದು ಬಂದಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.

ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply