November 8, 2025
WhatsApp Image 2025-06-20 at 3.49.37 PM

ಉಡುಪಿ: ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19 ರಾತ್ರಿ 11.­­­­­30 ರ ವೇಳೆಗೆ ನಡೆದಿದೆ.

ರೇಖಾ (27) ಕೊಲೆಯಾದ ಮಹಿಳೆ. ಕೊಳಂಬೆ ಗ್ರಾಮದ ನಿವಾಸಿಯಾದ ಆರೋಪಿ ಗಣೇಶ ಪೂಜಾರಿ(42) ಕೊಲೆ ಮಾಡಿದ ಪತಿ.

ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷದ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದರು. ರೇಖಾ ಪೆಡ್ರೋಲ್ ಬಂಕ್‌ವೊಂದರಲ್ಲಿ ಕೆಲಸಕ್ಕಿದ್ದು ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಈ ಬಗ್ಗೆ ಈ ಹಿಂದೆ ಶಂಕರನಾರಾಯಣ ಪೊಲೀಸರಿಗೆ ದೂರು ಅರ್ಜಿ ನೀಡಲಾಗಿದ್ದು ಅವರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಆದರೆ ಗಣೇಶ್ ತನ್ನ ಚಾಳಿ ಮುಂದುವರೆಸಿದ್ದು ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ್ದ. ಪತ್ನಿಗೆ ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಆರೋಪಿ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ, ಈಗ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply