August 30, 2025
WhatsApp Image 2025-06-20 at 10.33.37 AM

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಮೆಟ್ರಿಕ್ ಪೂರ್ವ(1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ, ಪಿಹೆಚ್.ಡಿ, ಎಂ.ಫಿಲ್, ಐಐಟಿ/ಐಐಎಂ ಹಾಗೂ ಬಿಎಸ್ಸಿ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಉದ್ದೇಶಿಸಲಾಗಿದ್ದು, ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಆನ್ಲೈನ್ ಸೇವಾ ಸಿಂಧು ಪೋರ್ಟಲ್ನ https://sevasindhu.karnataka.gov.in/ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳ ದೂ.ಸಂ: ಬಳ್ಳಾರಿ-08392-200125/224, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply