January 17, 2026
WhatsApp Image 2025-06-23 at 10.28.55 AM

ಕಾರ್ಕಳ: ಮಕ್ಕಳಾಗಿಲ್ಲ ಎಂದು ಮನನೊಂದು ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರಿನ ಬೊಳ್ಳ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರಿನ ಬೊಳ್ಳ ನಿವಾಸಿ ಗೀತಾ(52) ಎಂದು ಗುರುತಿಸಲಾಗಿದೆ.

ಗೀತಾ ಅವರಿಗೆ ಕಳೆದ 20 ವರ್ಷಗಳ ಹಿಂದೆ ಕುರಿಯಕೋಸ್ ಎಂಬವರ ಜತೆ ಮದುವೆಯಾಗಿತ್ತು. ಆದರೆ ಮಕ್ಕಳಾಗಿರಲಿಲ್ಲ. ಕಳೆದ ಎರಡು ವರ್ಷದ ಹಿಂದೆ ಗಂಡ ಮೃತಪಟ್ಟ ಹಿನ್ನೆಲೆಯಲ್ಲಿ ಗೀತಾ ಅವರು ಕೆ.ಪಿ ಅಬ್ರಹಾಂ ಅವರನ್ನು ಎರಡನೇ ಮದುವೆಯಾಗಿದ್ದರು. ಇವರಿಬ್ಬರ ನಡುವೆ ದಾಂಪತ್ಯದಲ್ಲಿ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಶುಕ್ರವಾರ ರಾತ್ರಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply