November 8, 2025
WhatsApp Image 2025-06-22 at 6.34.14 PM

: ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಗೃಹ ಸಚಿವರಾದ ಡಾ.‌ ಜಿ.ಪರಮೇಶ್ವರ ಅವರು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಸಮಾವೇಶದಲ್ಲಿ, ಪೊಲೀಸ್ ಪ್ರಗತಿ ಪರಿಶೀಲನೆ‌ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅಂಶಗಳು:-

ಕರಾವಳಿ ಭಾಗದಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು. ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇದೇ ಕಾರಣದಿಂದ ಆ ಭಾಗದ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ಕಳುಹಿಸುತ್ತಿದ್ದಾರೆ.

ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಫೇಕ್ ನ್ಯೂಸ್ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಆ್ಯಕ್ಷನ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಿದರು.

ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಸಾಗಣೆಯಾಗುತ್ತಿದೆ. ಯುವಕರ ಕೈಗೆ ಗಾಂಜಾ ಸುಲಭವಾಗಿ ಸಿಗುತ್ತಿದೆ ಎಂಬುದರ ಸಾರ್ವಜನಿಕ ವಲಯದಲ್ಲಿ ತೀವ್ರ ಬೇಸರವಿದೆ. ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯವಹಿಸಿದರೆ ಯುವಜನತೆಯ ಭವಿಷ್ಯ ಹಾಳಾಗುತ್ತದೆ. ರಾಜ್ಯವನ್ನು ಉಡ್ತಾ ಪಂಜಾಬ್‌ನಂತೆ ಆಗಲು ಬಿಡಬಾರದು ಎಂದರು.

About The Author

Leave a Reply