
ಮಂಗಳೂರು: ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂಬಾತನನ್ನು ಬಂಟ್ವಾಳ ರಾಯಿ ಎಂಬಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 27ರಂದು ಅಬ್ದುಲ್ ರಹ್ಮಾನ್ ಅವರ ಹತ್ಯೆಯಾಗಿತ್ತು.
