ಏರ್ ಇಂಡಿಯಾ ವಿಮಾನದಲ್ಲಿ ಏಕಾಏಕಿ ಕುಸಿದು ಬಿದ್ದ ಪೈಲೆಟ್ : ತಪ್ಪಿದ ಮತ್ತೊಂದು ದುರಂತ

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಹೃದಯಘಾತದಿಂದ ಸರಣಿ ಸಾವುಗಳು ಸಂಭವಿಸಿದ್ದು ಈಗಾಗಲೇ ಸರ್ಕಾರ ನಿರ್ಮಿಸಿದ ತಾಂತ್ರಿಕ ಸಲಹಾ ಸಮಿತಿ ವರದಿಸಿದ್ದ ಪಡಿಸಿದ್ದು ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಇದರ ಬೆನ್ನಲ್ಲೆ ದೆಹಲಿಗೆ ಹೊರಡಬೇಕಿದ್ದ ವಿಮಾನದಲ್ಲಿ ಪೈಲಟ್ ಒಬ್ಬರು ಕುಸಿದು ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ.

ಹೌದು ಪೈಲಟ್ ವಿಮಾನದ ಕಾಕ್ಪೀಟ್ ನಲ್ಲಿ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಬೇಕಿದೆ ವಿಮಾನದಲ್ಲಿ ಈ ಒಂದು ಘಟನೆ ನಡೆದಿದೆ ಏರ್ ಇಂಡಿಯಾ AI 2414 ವಿಮಾನದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಪೈಲೆಟ್ ವಿಮಾನದಲ್ಲಿಯೇ ಕುಸಿದು ಬಿದ್ದಿದ್ದಾರೆ.ನಂತರ ಮತ್ತೊಬ್ಬ ಪೈಲೆಟ್ ನೇಮಿಸಿದ ಬಳಿಕ ವಿಮಾನ ದೆಹಲಿಗೆ ತೆರಳಿದೆ.

Leave a Reply