August 25, 2025
WhatsApp Image 2025-07-05 at 10.22.05 AM

ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್. ಐ.ಎ. ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.

ಅಬ್ದುಲ್ ರೆಹಮಾನ್ ನಿಷೇಧಿತ ಪಿಎಫೈ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಎನ್ ಐ ಎ ನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

About The Author

Leave a Reply