August 25, 2025
WhatsApp Image 2025-07-06 at 5.12.31 PM

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ರಿಯಾಜ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘಪರಿವಾರದ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ , ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು, ಇವರು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಮಾತನಾಡಿರುವುದಾಗಿ ದೂರಲಾಗಿದೆ.

ಈ ಹೇಳಿಕೆ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

About The Author

Leave a Reply