November 8, 2025
WhatsApp Image 2025-05-27 at 10.17.59 PM

ಪ್ರಚೋದನಾಕಾರಿ ಹೇಳಿಕೆ ಪ್ರಕರಣ ಸಂಬಂಧ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ ಸೂಚನೆ ನೀಡಿ ಹೈಕೋರ್ಟ್ ಆದೇಶಿಸಿದೆ.

ಎಫ್‌ಐಆ‌ರ್ ರದ್ದು ಕೋರಿ ಶರಣ್ ಪಂಪ್ ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಪೀಠ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಪೊಲೀಸ್‌ ಇಲಾಖೆಗೆ ಸೂಚಿಸಿ, ಪೊಲೀಸರ ವಿಚಾರಣೆಗೆ ಸಹಕರಿಸಲು ಶರಣ್ ಪಂಪ್ ವೆಲ್ ಗೆ ಹೈಕೋರ್ಟ್ ತಾಕೀತು ಮಾಡಿದೆ.ಶರಣ್ ಪಂಪ್ ವೆಲ್ ವಿರುದ್ಧ ವಿನಾಕಾರಣ ದ್ವೇಷ ಭಾಷಣದ ಆರೋಪ ಹೊರಿಸಲಾಗಿದೆ. ಹೀಗಾಗಿ ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು. ವಾದ ಆಲಿಸಿದ ಹೈಕೋರ್ಟ್‌ ಮೇಲಿನ ಆದೇಶ ನೀಡಿದೆ.ಕಡಬ ಪೊಲೀಸರ ಎಫ್‌ಐಆರ್ ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ನವೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎಫ್‌ಐಆರ್ ಗೆ ಮಧ್ಯಂತರತಡೆಯಾಜ್ಞೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಅರುಣ್ ಶ್ಯಾಮ್, ಯಾವುದೇ ಅಪರಾಧದ ಅಂಶಗಳಿಲ್ಲದಿದ್ದರೂ ಎಫ್‌ಐಆ‌ರ್ ದಾಖಲಿಸಿದ್ದಾರೆಂದು ವಾದ ಮಂಡಿಸಿದು. ವಾದ ಆಲಿಸಿದ ಪೀಠ ಎಫ್‌ಐಆರ್ ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.

About The Author

Leave a Reply