November 8, 2025
WhatsApp Image 2025-07-11 at 11.25.57 AM

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.

ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.

ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ  ತೀರ್ಮಾನಿಸಿದೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

About The Author

Leave a Reply