November 8, 2025
WhatsApp Image 2025-07-12 at 10.23.32 AM

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು ದಂಪತಿಗಳು ಸಂಘ ಒಂದರಲ್ಲಿ ಸಾಲ ತೆಗೆದುಕೊಂಡಿರುತ್ತಾರೆ. ಆದರೆ ಈ ಒಂದು ಸಾಲ ತೀರಿಸಲು ಆಗದೆ 20 ದಿನದ ಹಸುಗೂಸನ್ನು ಮಾರಾಟ ಮಾಡಿರುವ ಅಮಾನವೀಯ ಘಟನೆ ದಾಂಡೇಲಿಯಲ್ಲಿ ನಡೆದಿದೆ.

ಹೌದು ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಳೇ ದಾಂಡೇಲಿಯ ದೇಶಪಾಂಡೆ ನಗರದಲ್ಲಿ ನಡೆದಿದೆ. ಮಗು ಖರೀದಿಸಿದ ಬೆಳಗಾವಿಯ ಆನಗೋಳದ ನಿವಾಸಿಗಳಾದ ನೂರ್ ಮಹಮ್ಮದ್ ಅಬ್ದುಲ್ ಮಜೀದ್ (47), ಕಿಶನ್ ಐರೇಕರ (42) ಮಗು ಖರೀದಿಸಿದವರು. ಸಾಲದ ಸುಳಿಗೆ ಸಿಲುಕಿದ ದಂಪತಿ ತಮ್ಮ 20 ದಿನದ ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಪೊಲೀಸರು ಬೆಳಗಾವಿಯಲ್ಲಿ ಮಗುವನ್ನು ಖರೀದಿಸಿದವರನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ.

ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬುವರು ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ತಂದೆ ವಸೀಂ ಚಂಡು ಪಟೇಲ್ ಮೈತುಂಬಾ ಸಾಲ ಮಾಡಿಕೊಂಡಿದ್ದರು. ಸಂಘದ ಸಾಲಗಾರರು ಸಾಲದ ಹಣವನ್ನು ವಾಪಸ್​ ಕೊಡುವಂತೆ ಬೆನ್ನು ಬಿದ್ದಿದ್ದರು. ಸಾಲಗಾರರ ಕಾಟಕ್ಕೆ ರೋಸಿ ಹೋದ ವಸೀಂ ಚಂಡು ಪಟೇಲ್ ಮತ್ತು ಮಾಹೀನ್ ದಂಪತಿ 20 ದಿನದ ಮಗುವನ್ನು ಮಾರಾಟ ಮಾಡಲು ನಿರ್ಧರಿಸಿದರು.

ಜುಲೈ 8ರಂದು ಧಾರವಾಡಕ್ಕೆ ಹೋಗಿ, ಬೆಳಗಾವಿಯ ನೂ‌ರ್ ಅಹಮ್ಮದ್ ಎಂಬಾತನಿಗೆ 3 ಲಕ್ಷ ರೂ.ಗೆ ಮಗುವನ್ನು ಮಾರಾಟ ಮಾಡಿದ್ದರು. ಮಾಹೀನ್ ಮನೆಯಲ್ಲಿ ಮಗು ಕಾಣದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಷ್ಮಾ ಮಹಾದೇವ ಪಾವಸ್ಥರ ಅವರು ದಾಂಡೇಲಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಅಂಗನವಾಡಿ ಕಾರ್ಯಕರ್ತೆಯ ದೂರಿನ ಹಿನ್ನೆಲೆಯಲ್ಲಿ ಪಿಎಸ್ಐ ಅಮೀನಸಾಬ ಅತ್ತಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ, ಮಗು ಖರೀಸಿದಿದವರನ್ನು ಅರೆಸ್ಟ್ ಮಾಡಿದ್ದಾರೆ.

About The Author

Leave a Reply