November 8, 2025
WhatsApp Image 2025-07-13 at 10.02.25 AM

ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಅವರು ಭಾನುವಾರ (ಜುಲೈ 13) ಬೆಳಗಿನ ಜಾವ ನಿಧ*ನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟ ಶ್ರೀನಿವಾಸ ರಾವ್ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟನ ನಿಧ*ನಕ್ಕೆ ಇಡೀ ಚಿತ್ರರಂಗವೇ ಸಂತಾಪ ಸೂಚಿಸಿದೆ. ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಅವರು ಎರಡು ವರ್ಷಗಳ ಹಿಂದಿನವರೆಗೂ ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. 2023ರಲ್ಲಿ ಬಿಡುಗಡೆಯಾದ ‘ಸುವರ್ಣ ಸುಂದರಿ’. ಎಂಬ ಚಿತ್ರದಲ್ಲಿ ಕೊನೆಯದಾಗಿ ನಟಿಸಿದ್ದರು. ಇದನ್ನೂ ಓದಿ: ರಾಯಚೂರು: ಹೃದಯಾಘಾತದಿಂದ ಕುಸಿದು ಬಿದ್ದು ರೈತ ಸಾವು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಖಳನಾಯಕ, ಪೋಷಕರ ಪಾತ್ರ ಹಾಗೂ ಹಾಸ್ಯನಟನಾಗಿ ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ಪ್ರೇಕ್ಷಕರ ಮನಗೆದ್ದಿದ್ದ ಶ್ರೀನಿವಾಸ ರಾವ್‌ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಂಗಭೂಮಿಯಿಂದ ಬಂದ ನಟ ತಮ್ಮದೇ ಆದ ನಟನಾ ಶೈಲಿಯಿಂದ ಜನರ ಮನ ಗೆದ್ದಿದ್ರು. ವಿಶೇಷವಾಗಿ ನಟ ಮೋಹನ್ ಬಾಬು ಅವರೊಂದಿಗೇ ಅವರು ಸುಮಾರು 60 ಚಿತ್ರಗಳಲ್ಲಿ ನಟಿಸಿದ್ದಾರೆ. ಶ್ರೀನಿವಾಸ ರಾವ್ ಜುಲೈ 10, 1942 ರಂದು ಆಂಧ್ರಪ್ರದೇಶದ ಕಂಕಿಪಡುವಿನಲ್ಲಿ ಜನಿಸಿದ್ದರು. ತಂದೆ ಸೀತಾರಾಮಾಂಜನೇಯುಲು ವೈದ್ಯರಾಗಿದ್ದರು. ಬಾಲ್ಯದಲ್ಲಿ ತಂದೆಯಂತೆ ವೈದ್ಯನಾಗಬೇಕೆಂದು ಬಯಸಿದ್ದರೂ, ಶಾಲಾ ದಿನಗಳಲ್ಲಿ ನಾಟಕಗಳಿಗೆ ಕಾಲಿಟ್ಟಿದ್ದರಿಂದ ನಟನೆಯ ಬಗ್ಗೆ ಆಸಕ್ತಿ ಬೆಳೆಯಿತು. ಪದವಿ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಪಡೆದು ನಟನೆಯನ್ನು ವೃತ್ತಿಯನ್ನಾಗಿ ಮಾಡಿಕೊಂಡರು. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದ ನಮ್ಮ ಬಸವ, ರಕ್ತ ಕಣ್ಣೀರು ಚಿತ್ರಗಳಲ್ಲಿ ನಟಿಸಿದ್ದರು. ಕೋಟಾ ಶ್ರೀನಿವಾಸ್ ಕೇವಲ ನಟರಲ್ಲ, ರಾಜಕೀಯಕ್ಕೂ ಪ್ರವೇಶಿಸಿದ್ದಾರೆ. ಶ್ರೀನಿವಾಸ ರಾವ್ 1999 ರಿಂದ 2004 ರವರೆಗೆ ವಿಜಯವಾಡ ಪೂರ್ವ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

About The Author

Leave a Reply