February 18, 2026
AA-130725-car
 ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಜಲಪಾತಕ್ಕೆ ಬಿದ್ದಿದೆ.ಬೆಂಗಳೂರು ಮೂಲದ ಪ್ರವಾಸಿಗರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

About The Author

Leave a Reply