October 13, 2025
WhatsApp Image 2025-07-14 at 5.34.41 PM

 ಬೆಂಗಳೂರಿನಲ್ಲಿ ಎಣ್ಣೆ ಪಾರ್ಟಿ ಮಾಡುವ ಬೆಲೆ ಗಲಾಟೆ ಶುರುವಾಗಿದೆ ಈ ವೇಳೆ ಸ್ನೇಹಿತರೆ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಲ್ಲದೆ, ಈ ವೇಳೆ ಯುವಕನ ಒಂದು ಕಾಲು ಕಟ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸ್ನೇಹಿತರಿಂದಲೇ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ತೇಜಸ್ (24) ಎಂದು ತಿಳಿದುಬಂದಿದೆ. ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದ್ದು, ಆಟೋ ಚಾಲಕನಾಗಿದ್ದ ತೇಜಸ್, ಶುಕ್ರವಾರ ರಾತ್ರಿ ಕೆಲಸ ಮುಗಿದ ಬಳಿಕ ಸ್ನೇಹಿತ ಸಂತೋಷ್ ಜೊತೆ ರುದ್ರಪ್ಪ ಗಾರ್ಡನ್‌ನಲ್ಲಿರುವ ಮಂಜು ಬಾರ್‌ಗೆ ತೆರಳಿದ್ದ.

ಇಬ್ಬರೂ ಪಾರ್ಟಿ ಮಾಡುತ್ತಿದ್ದಾಗ ಸಂತೋಷ್‍ನ ಸ್ನೇಹಿತರಾದ ರಾಹುಲ್, ಪ್ರಜ್ವಲ್ ಹಾಗೂ ಅಭಿಷೇಕ್ ಬಾರ್‌ಗೆ ಬಂದಿದ್ದರು.ಒಟ್ಟಿಗೆ ಕುಳಿತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಸಂತೋಷ್ ಹಾಗೂ ರಾಹುಲ್, ಪ್ರಜ್ವಲ್, ಅಭಿಷೇಕ್‌ನ ನಡುವೆ ಜಗಳ ಆರಂಭವಾಗಿತ್ತು. ಈ ವೇಳೆ ಸಂತೋಷ್‍ನ ಪರವಾಗಿ ತೇಜಸ್ ಮಾತನಾಡಿದ್ದ. ಜಗಳ ಅತಿರೇಕಕ್ಕೆ ತಿರುಗಿದಾಗ ಇಲ್ಲೇ ಇರು ಬರುತ್ತೇವೆ ಎಂದು ಆರೋಪಿಗಳು ಹೊರ ಹೋಗಿದ್ದರು.

ಇತ್ತ ಸಂತೋಷ್ ಹಾಗೂ ತೇಜಸ್ ಪಾರ್ಟಿ ಮುಗಿಸಿ ಹೊರಡಲು ಸಿದ್ಧವಾಗುತ್ತಿದ್ದಂತೆ ಮಾರಕಾಸ್ತ್ರಗಳ ಸಮೇತ ಬಂದಿದ್ದ ಆರೋಪಿಗಳು ತೇಜಸ್‌ನನ್ನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಎಸಗಿದ್ದಾರೆ. ಹಲ್ಲೆಯಿಂದಾಗಿ ತೇಜಸ್‌ನ ಕಾಲು ಭಾಗಶಃ ತುಂಡಾಗಿದ್ದು, ಕುತ್ತಿಗೆ ಹಿಂಭಾಗಕ್ಕೂ ತೀವ್ರ ಗಾಯವಾಗಿದೆ. ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದವನನ್ನ ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಭಂದ ಈಗಾಗಲೇ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದು ಮತ್ತೊರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ.

About The Author

Leave a Reply