November 9, 2025
WhatsApp Image 2025-07-18 at 9.26.00 AM

ಮಂಗಳೂರು: ಹೆಬ್ಬಾವು ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು  ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಬಡಗ ಉಳಿಚ್ಚಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್‌ ಬ್ಯಾಂಕ್ ಬಳಿಯ ನಾಕುಪ್ರಾಣಿ ಅಂಗಡಿ ಮಾಲೀಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬಂದಿ ಉಳ್ಳಾಲ ಹರೇಕಳ ಗ್ರಾಸುವ ಶುಹಮ್ಮದ್ ಮುಸ್ತಥಾ (22), ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಬಂಧಿತರು.

ಹೆಬ್ಬಾವು ಮಾರಾಟ ಜಾಲದ ಮಾಹಿತಿ ತಿಳಿದ ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾಯಾಚರಣೆ ನಡೆಸಿದ್ದಾರೆ. ಮೊದಲಿಗೆ ಇಬ್ಬರು ಹೆಬ್ಬಾವು ಖರೀದಿಸುವ ನೆಪದಲ್ಲಿ ವಿಹಾಲ್‌ನನ್ನು ಸಂಪರ್ಕಿಸಿದ್ದಾರೆ. ನಗರದ ಕದ್ರಿಯ ಅಪ್ಪಚ್ಚ ಕಟ್ಟೆಯ ಬಳಿ ಈ ಬಗ್ಗೆ ಆತನೊಂದಿಗೆ ಮಾತುಕತೆ ನಡೆಸಿದ್ದಾರೆ.ಆತ ಹಾವು ತೋರಿಸಿ 45 ಸಾವಿರಕ್ಕೆ ರೇಟ್ ಫಿಕ್ಸ್ ಮಾಡಿದ್ದಾನೆ.ಈ ವೇಳೆ ಆತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರಿಂದ ಭೀತನಾದ ಆತ ಹಾವು ನನ್ನದಲ್ಲ ಎಂದು ಅಪ್ರಾಪ್ತ ವಯಸ್ಸಿನ ಬಾಲಕ ಅದನ್ನು ಮಾರಲೆಂದು ನೀಡಿದ್ದಾನೆ ಎಂದಿದ್ದಾನೆ. ಮುಂದಿನ ಹಂತವಾಗಿ ಆತನ ಮೂಲಕವೇ ಬಾಲಕನಿಗೆ ಕರೆ ಮಾಡಿಸಿ ಮಾಲ್ ವೊಂದರ ಬಳಿ ಆತನನ್ನು ಬಂಧಿಸಿದ್ದಾರೆ.

ಸ್ಟೇಟ್ ಬ್ಯಾಂಕ್‌ನಲ್ಲಿರುವ ಸಾಕು ಪ್ರಾಣಿ ಮಾರಾಟ ಅಂಗಡಿಯಲ್ಲೂ ಹಾವು ಮಾರಾಟ ನಡೆಯುತ್ತಿದೆ ಎಂದು ಮಾಹಿತಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಇದೇ ಸಂದರ್ಭ ಗ್ರಾಹಕರ ಸೋಗಿನಲ್ಲಿ ಓರ್ವ ಯುವಕನನ್ನು ಅಲ್ಲಿಗೆ ಕಳುಹಿಸಿದ್ದಾರೆಯ ಆಗ ಅಲ್ಲಿನ ಸಿಬ್ಬಂದಿ ತಮ್ಮಲ್ಲಿ ಹಾವಿದೆ ತರಿಸಿ ಕೊಡುತ್ತೇವೆ ಎಂದು ವಿಹಾಲ್‌ ಕರೆ ಮಾಡಿದ್ದಾರೆ.ತಕ್ಷಣ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮಾಲೀಕ ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದಾರೆ.ಅಂಗಡಿಯಲ್ಲಿ ನಕ್ಷತ್ರ ಆಮೆಗಳೂ ಸಿಕ್ಕಿದ್ದು ಅವುಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ.

ವನ್ಯಜೀವಿ ಸಂರಕ್ಷಣ ಕಾಯ್ದೆ 1972ರ ಅನುಸೂಚಿ (ಶೆಡ್ಯೂಲ್ 1) ಭಾಗ ಸಿ ಯಡಿ ಪ್ರಾಣಿಯಾದ ಇಂಡಿಯನ್ ರಾಜ್ ಪ್ರೈಥಾನ್ (ಹೆಬ್ಬಾವು ಅನ್ನು ಹೊರ ದೇಶ ಅಂದರೆ ಬರ್ಮೀಸ್ ಬಾರ್ ಪೈಥಾನ್ ಎಂದು ಮಾರಾಟ ಮಾರಾಟ ಮಾಡುತ್ತಿದ್ದರು. ಇದನ್ನು ಕೆಲವರು ಮನೆಯಲ್ಲಿ ಸಾಕುವ ಉದ್ದೇಶದಿಂದ ಖರೀದಿಸುತ್ತಿದ್ದರು. ಈ ಜಾಲಕ್ಕೆ ತಮಿಳುನಾಡುವರೆಗೆ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ. ಕ್ಲಿಫರ್ಡ್ ಲೋಬೊ ಅಪರ ನಿರ್ದೇಶನದಂತೆ ಮುಂದಿನ ತನಿಖೆ ನಡೆಯಲಿದೆ.

About The Author

Leave a Reply