ಭಾರೀ ಮಳೆ: ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜು.19) ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು, ಬಂಟ್ವಾಳ ತಾಲೂಕುಗಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply