ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಕೋರ್ಟ್‌ ಆದೇಶ

ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯ್ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ

ಶೀಕ್ಷೇತ್ರ ಧರ್ಮಸ್ಥಳ ದೇವಾಲಯ ಸುತ್ತಮುತ್ತ ಅಪರಿಚಿತ ಮೃತ ದೇಹಗಳನ್ನು ಹೂತುಹಾಕಲಾಗಿದೆ ಎನ್ನಲಾದ ವಿಚಾರ ಸಂಬಂಧ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಕುಟುಂಬದವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ಹೊರಡಿಸಿದೆ.

ಪ್ರಕರಣದ ಕುರಿತು ತಮ್ಮ ಕುಟುಂಬದವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮತ್ತು ಅವಹೇಳನಕಾರಿ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವ‌ರ್, ಯೂಟ್ಯೂಬರ್ ಎಂ.ಡಿ. ಸಮೀರ್ ಮತ್ತು ಮಾಧ್ಯಮದವರ ನಿರ್ದೇಶಿಸಿ ನಿರ್ಬಂಧಕಾಜ್ಞೆ ಹೊರಡಿಸಬೇಕು ಎಂದು ಕೋರಿ ಡಿ.ಹರ್ಷೇಂದ್ರ ಕುಮಾರ್ ಅಸಲು ದಾವೆ ದಾಖಲಿಸಿದ್ದಾರೆ. ದಾವೆಯ ವಿಚಾರಣೆ ನಡೆಸಿದ 11ನೇ ಹೆಚ್ಚುವರಿ (ಸಿಸಿಎಚ್-26) ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

Leave a Reply