
ನಗರದ ಆಸ್ಪತ್ರೆಯೊಂದಕ್ಕೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಆ ರೋಗಿ ಮೃತಪಟ್ಟ ಘಟನೆ ಇಂದು ಉಡುಪಿಯ ಎಂಜಿಎಂ ಕಾಲೇಜಿನ ಮುಂದೆ ಸಂಭವಿಸಿದೆ. ಈ ಅಪಘಾತದಲ್ಲಿ ರೋಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೋಟೇಶ್ವರ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ರೋಗಿಯನ್ನು ಕರೆತರುವಾಗ ಈ ಅಪಘಾತ ನಡೆದಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
