
ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರ ವಿರುದ್ಧ ದಾಖಲಾಗಿದ 5 ಕೋಟಿ ರೂ. ವಂಚನೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಇದೀಗ ಆ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

ಈ ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣ ಬಿಡುಗಡೆ ಕೋರಿ ದೂರುದಾರ ಉದ್ಯಮಿ ಗೋವಿಂದಬಾಬು ಪೂಜಾರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ಸಂದರ್ಭ ದೂರುದಾರರ ಪರ ಹಿರಿಯ ವಕೀಲ ಚಂದ್ರಮೌಳಿ, ನಮ್ಮ ಹಣ ಬಿಡುಗಡೆ ಕೋರಿದ್ದ ಅರ್ಜಿ ವಜಾಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಣ ಪಡೆದಿದ್ದರು. ಚೈತ ಕುಂದಾಪುರ ಅವರೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ. ಒಂಥರಾ ಸೆಲೆಬ್ರಿಟಿ. ಪೊಲೀಸರು ವಶಕ್ಕೆ ಪಡೆದಿರುವ ಹಣ ನಮಗೆ ಮರಳಿಸಬೇಕು ಎಂದು ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಏನು ತೀರ್ಪು ನೀಡುತ್ತೆ ನೋಡಬೇಕಷ್ಟೆ.
