November 8, 2025
WhatsApp Image 2025-07-14 at 11.55.16 AM

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ನಡೆದಿದೆ.

ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ದೂರುದಾರೆಯ ಮಾಹಿತಿ ಪ್ರಕಾರ, ಜುಲೈ 22ರಂದು ಮಂಗಳೂರಿನಿಂದ ಪುತ್ತೂರಿಗೆ ಬಸ್‌ನಲ್ಲಿ ಸಂಜೆ 6:30ರ ಸುಮಾರಿಗೆ ಪ್ರಯಾಣಿಸುತ್ತಿದ್ದಾಗ, ಬಂಟ್ವಾಳ ತಾಲೂಕಿನ ಮಾಣಿ ಬಳಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ.

ತಕ್ಷಣ ದೂರುದಾರರು ಆತನಿಗೆ ಎಚ್ಚರಿಕೆ ನೀಡಿದ್ದು, ಬಳಿಕ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಸ್‌ ಪುತ್ತೂರು ಬಸ್ ನಿಲ್ದಾಣ ತಲುಪಿದಾಗ, ಆರೋಪಿ ತುರ್ತು ನಿರ್ಗಮನ ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದರೂ, ದೂರುದಾರರ ತಂದೆ ಮತ್ತು ಸಾರ್ವಜನಿಕರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಹಿಡಿದಿಟ್ಟಿದ್ದಾರೆ.

ಬಂಧಿತನನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಒಪ್ಪಿಸಲಾಗಿದೆ.

ಈ ಸಂಬಂಧ ಅ.ರ್ರ. 56/2025ಕಲಂ 0 75 BNS 2023ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About The Author

Leave a Reply