November 8, 2025
WhatsApp Image 2025-07-23 at 3.36.10 PM

 ಕರ್ನಾಟಕದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ನಡೆಸಲು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇಂದು ಬೆಂಗಳೂರಿನ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಸಂಬಂಧ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಭೆ ನಡೆಯಿತು. ಸಚಿವ ಶಿವರಾಜ್ ತಂಗಡಗಿ ಮಧುಸೂದನ್ ನಾಯಕ್ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಆಗಿರುವ ಮಧುಸೂದನ್ ಈ ಒಂದು ಸಭೆಯಲ್ಲಿ ಭಾಗವಹಿಸಿದ್ದು ಆಯೋಗದ ಕೈಗೊಳ್ಳಬೇಕಾದ ವಿಷಯಗಳ ಕುರಿತು ಚರ್ಚಿಸಿದರು.

ಈ ಒಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜಾತಿ ಗಣತಿಯಲ್ಲಿ ಲೋಪ ದೋಷವಾಗದಂತೆ ಶಂ ಸಿದ್ದರಾಮಯ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಕುರಿತು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ವೈಜ್ಞಾನಿಕವಾಗಿ ಜಾತಿ ಗಣತಿಗೆ ರಾಜ್ಯ ಸರ್ಕಾರ ಇದೀಗ ನಿರ್ಧರಿಸಿದೆ.

ಹೊಸ ಜಾತಿಗಣತಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ಬಯಸುವಂತೆ ಸೂಚನೆ ನೀಡಿದ್ದಾರೆ.ವಿಪಕ್ಷಗಳ ಟೀಕೆ ಬೆನ್ನಲ್ಲೇ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಕ್ಕ ಪ್ಲಾನ್ ನೊಂದಿಗೆ ಜಾತಿಗಣತಿ ಮಾಡಲು ನಿರ್ಧರಿಸಲಾಗಿದೆ ಮಾನವ ಸಂಪನ್ಮೂಲ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಸಿ, ಲೋಪ ದೋಷ ಆಗದಂತೆ ಈ ಬಗ್ಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ. ಕೇವಲ 15 ದಿನಗಳಲ್ಲಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಕ್ಟೋಬರ್ ತಿಂಗಳು ಒಳಗೆ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆ ಆರಂಭಿಸಿ.ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ಇರಬೇಕು. ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ಖಾತ್ರಿಪಡಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು .

About The Author

Leave a Reply