ಅತಿಥಿ ಶಿಕ್ಷಕಿ ಸಫ್ರೀನಾ ಶೇಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ!! ಕೊಲೆ ಎಂದು ಆರೋಪ

ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್‌ ಎಂಬವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆನ್ನಲಾಗಿದ್ದು, ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ನಾಪೋಕ್ಲುವಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಪತಿ ನಜೀರ್‌ ಸಫ್ರೀನಾಳನ್ನು ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.

ಆದರೆ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಹೇಳಲಾಗುತ್ತಿದೆ.ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನಾ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಮೃತ ಸಫ್ರೀನಾ ದೇಹದಲ್ಲಿ ಗಾಯಗಳ ಗುರುತು ಇದ್ದು, ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಆಕೆಯ ಸಹೋದರ ರುವೈಸ್‌ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Leave a Reply