August 25, 2025
WhatsApp Image 2025-07-25 at 11.19.06 AM

ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ 6 ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ.

ಇಂದು (ಜು.25) ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ 6 ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಲ್ಲದೇ 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ.

ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವಶೇಷಗಳ ಅಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಕ್ರೇನ್‌ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.

 

About The Author

Leave a Reply