
ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ತಾ.ಪಂ. ಮಾಜಿ ಸದಸ್ಯೆ, ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ನೆಲ್ಯಾಡಿಯ ಉಷಾ ಅಂಚನ್ ರವರು ನೇಮಕಗೊಂಡಿದ್ದಾರೆ.


ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಉಸ್ತುವಾರಿಯೂ ಆಗಿರುವ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ಸೂಚನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಶಿಫಾರಸಿನ ಮೇರೆಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಲಾ ಲಂಬಾ ಅವರು ಈ ನೇಮಕ ಮಾಡಿದ್ದಾರೆ.

ನೆಲ್ಯಾಡಿ ಸಮೀಪದ ಕುಂಡಡ್ಕ ನಿವಾಸಿಯಾಗಿರುವ ಉಷಾ ಅಂಚನ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು ಜೊತೆಗೆ ಸಹಕಾರಿ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
