August 25, 2025
WhatsApp Image 2025-07-27 at 3.07.22 PM

ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್‌ಪೋರ್ಟ್‌ನಲ್ಲಿ

ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯನಾಗಿದ್ದ ಸಾಲಿ, ಶಾಲು ಕಿಂಗ್ ಮೀಡಿಯಾ, ಶಾಲು ಕಿಂಗ್ ವ್ಲಾಗ್ಸ್ ಮತ್ತು ಶಾಲು ಕಿಂಗ್ ಫ್ಯಾಮಿಲಿ ಸೇರಿದಂತೆ ವಿವಿಧ ಹೆಸರುಗಳಲ್ಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹೊಂದಿದ್ದಾನೆ.

ಈತನಿಗೆ 2016ರಲ್ಲಿ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತ್ನಿಯಿಂದ ದೂರವಾಗಿದ್ದ ಸಮಯದಲ್ಲಿ ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ 15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಆಕೆಗೆ ನಾನು ಮದುವೆಯಾಗುತ್ತೇನೆ ಎಂದು ಹೇಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈತನ ಮೇಲೆ ಪ್ರಕರಣ ದಾಖಲಾದ ನಂತರ, ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಕೊಯಿಲಾಂಡಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದು, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತನನ್ನು ಬಂಧಿಸಲಾಗಿದೆ.

About The Author

Leave a Reply