ಉಳ್ಳಾಲ: ಭಾರೀ ಮಳೆಗೆ ಆಟೋ ರಿಕ್ಷಾದ ಮೇಲೆ ಬಿದ್ದ ವಿದ್ಯುತ್ ಕಂಬ

ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯ ಜಾಯ್‌ಲ್ಯಾಂಡ್ ಶಾಲೆಯ ಸಮೀಪದ ಕೊಲ್ಯ ಸಾರಸ್ವತ ಕಾಲೋನಿಯಲ್ಲಿ ಭಾರೀ ಮಳೆಗೆ ಇಂದು ನಸುಕಿನ ಜಾವ ವಿದ್ಯುತ್ ಕಂಬಗಳು ಆಟೋ ರಿಕ್ಷಾದ ಮೇಲೆ ಬಿದ್ದು ರಿಕ್ಷಾ ಪಲ್ಟಿಯಾಗಿ ಹಾನಿಯಾಗಿರುವ ಘಟನೆ ನಡೆದಿದೆ.

ಹಾನಿಗೊಂಡ ರಿಕ್ಷಾ ಮಾಧವ ಗಟ್ಟಿ ಎಂಬವರಿಗೆ ಸೇರಿದಾಗಿದೆ. ಮೂರು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದ ಪರಿಣಾಮ ಸೋಮೇಶ್ವರ ತೊಕ್ಕೊಟ್ಟು ಒಳಪೇಟೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ನಸುಕಿನಲ್ಲಿ ಘಟನೆ ಸಂಭವಿಸಿದ್ದರಿಂದ ಸ್ಥಳದಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್ ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು.

Leave a Reply