ಪುತ್ತೂರು: ವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಗಣೇಶ್ ಬಾಗ್ ಎಂಬಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ದಿ.ವಸಂತ ಎಂಬವರ ಪುತ್ರ ವಿಶ್ವಾಸ್(38) ಮೃತಪಟ್ಟ ಯುವಕ.

ವಿಶ್ವಾಸ್ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಅಂಗನವಾಡಿಯಿಂದ ತನ್ನ ಕೆಲಸ ಮುಗಿಸಿ ಮನೆಗೆ ಸಂಜೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಶ್ವಾಸ್ ಅವರು ತನ್ನ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ 2ನೇ ತರಗತಿಯಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಅಗಲಿದ್ದಾರೆ.

ಮೃತರ ಪತ್ನಿ ದಿವ್ಯಾ ಅವರು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply