ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಳಿಗೆಯಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಂಪ್ ವೆಲ್ ನಲ್ಲಿರುವ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಪಂಪ್ ವೆಲ್ ನಲ್ಲಿರುವ ‘ಭಾರತ್ ಆಗ್ರೋ’ ಮಳಿಗೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಕೋಳಿ ಆಹಾರಗಳಿಗೆ ಹಾನಿಯಾಗಿವೆ.

ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

Leave a Reply