
ಮಂಗಳೂರು: ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು ಲಂಚ ಪಡೆದಿದ್ದರು ಎಂದು ಆರೋಪಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಮೇ 28 ರಂದು ಬಂಧಿಸಿದ್ದರು. ಇದರ ವಿರುದ್ಧ ಹೈಕೋರ್ಟ್‌ಗೆ ಸೂಕ್ತ ದಾಖಲೆಗಳೊಂದಿಗೆ ಕೃಷ್ಣವೇಣಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ.

ಯಾರೋ ನೀಡಿದ ಸುಳ್ಳು ದೂರನ್ನು ಆಧರಿಸಿ ಲೋಕಾಯುಕ್ತ ದಾಳಿ ನಡೆಸಿ ನನ್ನನ್ನು ಬಂಧಿಸಿದ್ದಾಗಿ ಕೃಷ್ಣವೇಣಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣ ವೇಣಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.