August 26, 2025
WhatsApp Image 2025-08-05 at 5.30.17 PM

ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. 

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಎಂಎಲ್ ಸಿ ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಶರಣಗೌಡ ಎಂಬುವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಈ ವೇಳೆಯಲ್ಲಿ ಹಲ್ಲೆಗೆ ಯತ್ನಿಸಿದಂತ ಅವರ ಆಪ್ತ, ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳದಲ್ಲಿದ್ದಂತ ಸಾರ್ವಜನಿಕರು ಥಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. ಲಿಂಗಸುಗೂರು ತಾಲ್ಲೂಕಿನ ಗೋರೆಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಂಎಲ್ಸಿ ಮೇಲೆ ಹಲ್ಲೆಗೆ ಯತ್ನಿಸಿದಂತ ಆಪ್ತನಿಗೆ ಥಳಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದಲೇ ಕಾಂಗ್ರೆಸ್ ಎಂಎಲ್ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದು ಅಚ್ಚರಿ ಉಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author

Leave a Reply