February 18, 2026
WhatsApp Image 2025-08-06 at 4.04.25 PM

ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಸವಾರನೋರ್ವ ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಹೊಡೆದಿದ್ದು ಗ್ಲಾಸ್ ಓಡೆದು ಹೋಗಿದೆ. ಇದರಿಂದ ಸುಮಾರು 15ಸಾವಿರ ರೂ ನಷ್ಟ ಸಂಭವಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply