ಮಂಗಳೂರು: BJP ವತಿಯಿಂದ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಮೋರ್ಚಾ ಮಂಗಳೂರು ಮಂಡಲ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರ ಆಶಯದಂತೆ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವು ಅಲ್ಪಸಂಖ್ಯಾತ ಮೋರ್ಚಾ ಮಂಡಲ ಅಧ್ಯಕ್ಷರಾದ ಕರೀಂ ಉಚ್ಚಿಲ್ ರವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ರವರು ಬಿಜೆಪಿಯ ಎಲ್ಲಾ ಅಲ್ಪಸಂಖ್ಯಾತರ ಕಾರ್ಯಕರ್ತರ ಮನೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಜಿ ರವರ ತಾಯಿಯ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಮಾಡಬೇಕೆಂದು ಹಾಗೂ ಕೇಂದ್ರ ಸರಕಾರದ ಜನಪರ ಕಾರ್ಯಕ್ರಮದ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ನಿಗಮದ ಮಾಜಿ ಅಧ್ಯಕ್ಷರಾದ ಮುಕ್ತಾರ್ ಪಠಾಣ್ ಹುಸೇನ್ ರವರು ಮಾತನಾಡಿ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಜನಪರ ಹಾಗೂ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ರೀತಿಯ ಯೋಜನೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಶಾನವಾಜ್, ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೋಟ್ಟು, ಉಪಾಧ್ಯಕ್ಷರಾದ ಸುರೇಶ್ ಆಳ್ವ, ರವಿಶಂಕರ್ ಸೋಮೇಶ್ವರ, ಸೋಮೇಶ್ವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಪುರುಷೋತ್ತಮ್ ಗಟ್ಟಿ, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಉಪಾಧ್ಯಕ್ಷರಾದ ಸಿದ್ದೀಕ್ ತಲಪಾಡಿ, ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಕಾರ್ಯಕಾರಿ ಸದಸ್ಯರಾದ ಸಿರಾಜ್ ಮುಡಿಪು, ಮಂಗಳೂರು ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷರಾದ ಕರಿಂ ಉಚ್ಚಿಲ್, ಬಿಜೆಪಿ ಮುಖಂಡರಾದ ಹೇಮಂತ್ ಶೆಟ್ಟಿ ದೇರಳಕಟ್ಟೆ, ಓಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸಂಪತ್ ಕುಕ್ಯಾನ್, ರವಿ ಸೋವೂರು, ಶಕ್ತಿಕೇಂದ್ರ ಪ್ರಮುಖರಾದ ಶಶಿಕಲಾ ಕಾಟಂಗರ ಗುಡ್ಡೆ, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾದ ಮಹಮ್ಮದ್ ಅಸ್ಗರ್ ಸ್ವಾಗತಿಸಿದರು, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಜಮಾಲುದ್ದೀನ್ ಧನ್ಯವಾದ ಹೇಳಿದರು.

Leave a Reply