August 27, 2025
WhatsApp Image 2025-05-31 at 11.11.16 AM

ಮಂಗಳೂರು: ಬೈಟ್‌ಗಾಗಿ ಒತ್ತಡ ಮತ್ತು ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಸುವರ್ಣ ನ್ಯೂಸ್ ನ ಸಂಪಾದಕ ಅಜಿತ್ ಹನುಮಕ್ಕನರ್, ವರದಿಗಾರ ಮತ್ತು ಕ್ಯಾಮರಾ ಮೆನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಪ್ರಕರಣದ ದೂರುದಾರರಾದ ಗಣೇಶ್ ಶೆಟ್ಟಿ (28) ಅವರು ನೀಡಿದ ದೂರಿನ ಪ್ರಕಾರ, ಆಗಸ್ಟ್ 6, 2025 ರಂದು ಧರ್ಮಸ್ಥಳದ ಪಾಂಗಳ ಎಂಬಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಗಾಯಾಳುವನ್ನು ನೋಡಲು ಬಂದಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಅವರನ್ನು ಸುವರ್ಣ ನ್ಯೂಸ್ ವರದಿಗಾರ ಹಾಗೂ ಕ್ಯಾಮರಾಮನ್ ತಡೆದು, ಬೈಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಅವರು ಬೈಟ್ ನೀಡಲು ನಿರಾಕರಿಸಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಳ್ಳಾಟ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆ ನಡೆದ ಕೆಲವೇ ಸಮಯದಲ್ಲಿ, ಸುವರ್ಣ ನ್ಯೂಸ್ ಸುದ್ದಿ ವಾಹಿನಿಯಲ್ಲಿ ಆ್ಯಂಕರ್ ಅಜಿತ್ ಹನುಮಕ್ಕನವರ್, “ಸುವರ್ಣ ನ್ಯೂಸ್ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 76/2025 ಕಲಂ: 126(2), 296, 351 ಜೊತೆಗೆ 3(5) ಬಿಎನ್‌ಎಸ್ -2023 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ

About The Author

Leave a Reply