August 29, 2025
WhatsApp Image 2025-07-31 at 7.03.57 PM

 ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಇಂದು ಮತ್ತೊಂದು ಹೊಸ ಜಾಗದಲ್ಲಿ ಎಸ್ ಐಟಿ ತಂಡ ಶೋಧಕಾರ್ಯ ಆರಂಭಿಸಿದೆ.ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ ದೂರುದಾರ ತೋರಿಸಿರುವ 16ನೇ ಪಾಯಿಂಟ್ ನಲ್ಲಿ ಎಸ್ ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯ ನಡೆಸಿದೆ.

ನಿನ್ನೆಯು ಸಹ 13ನೇ ಪಾಯಿಂಟ್ ನಲ್ಲಿ ಶೋಧ ನಡೆಸುವ ನಿರೀಕ್ಷೆ ಇತ್ತು. ಆದರೆ ಹೊಸದೊಂದು ಸ್ಥಳ 15ನೇ ಪಾಯಿಂಟ್ ನಲ್ಲಿ SIT ಶೋಧ ನಡೆಸಿತ್ತು. ಇದೀಗ ದೂರುದಾರ ತೋರಿಸಿರುವ 16ನೇ ಪಾಯಿಂಟ್ ನಲ್ಲಿ ಉತ್ಖನನ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್ ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ 16ನೇ ಪಾಯಿಂಟ್ ಎಂದು ಗುರುತಿಸಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ.

About The Author

Leave a Reply