
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ..ಅಲ್ಲದೆ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಕೂಡ ಎಂಟ್ರಿ ಕೊಟ್ಟಿದ್ದು, ಎಸ್ಐಟಿ ಅಧಿಕಾರಿಗಳಿಂದ ಹಾಗೂ ಪೊಲೀಸರಿಂದ ಸಮಗ್ರ ಮಾಹಿತಿ ಕಲೆ ಹಾಕುತ್ತಿದೆ. ಅಲ್ಲದೆ ಸುಮೋಟೋ ಕೇಸ್ ಕೂಡ ದಾಖಲಿಸಿಕೊಂಡಿದೆ.


ಈ ವಿಚಾರವಾಗಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡಲು ಸದನದಲ್ಲಿ ಪ್ರಸ್ತಾಪ ಮಾಡಲು ಸ್ಪೀಕರ್ಗೆ ಅವಕಾಶ ಕೇಳಿದ್ದೇವೆ. ಧರ್ಮಸ್ಥಳ ಪ್ರಕರಣದ ಕುರಿತು ಚರ್ಚೆಗೆ ಅವಕಾಶ ಕೊಡುತ್ತೇವೆ ಇಂದು ಸಭಾಧ್ಯಕ್ಷರು ಹೇಳಿದ್ದಾರೆ ಇವತ್ತು ಅವಕಾಶ ಕೊಟ್ಟರೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಸುನೀಲ್ ಕುಮಾರ್ ತಿಳಿಸಿದರು.
