November 8, 2025
WhatsApp Image 2025-08-12 at 12.23.46 PM

ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆ ಬಳಿಕ ತುಮಕೂರು ಜಿಲ್ಲೆಯ ಮಧುಗಿರಿ ಬಂದ್ ಗೆ ಅಭಿಮಾನಿಗಳು ಕರೆ ಕೊಟ್ಟಿದ್ದಾರೆ. ಈ ನಡುವೆ ಮಧುಗಿರಿಯಲ್ಲಿ ಅಭಿಮಾನಿಗಳು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಧುಗಿರಿ ಪಟ್ಟಣದಲ್ಲಿ ಕೆ.ಎನ್. ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಕೆಲವರು ಪೆಟ್ರೋಲ್ ಸುರಿದುಕೊಂಡಿದ್ದಾರೆ. ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆ ಬಳಿಕ ಮಧುಗಿರಿ ಬಂದ್ ಗೆ ರಾಜಣ್ಣ ಅಭಿಮಾನಿಗಳು ಕರೆ ಕೊಟ್ಟಿದ್ದಾರೆ.

ಇಂದು ಮಧುಗಿರಿಯಲ್ಲಿ ನಡೆದ ಕೆ.ಎನ್. ರಾಜಣ್ಣ ಅಭಿಮಾನಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದು ಮಧ್ಯಾಹ್ನ 1 ಗಂಟೆ ಬಳಿಕ ಮಧುಗಿರಿ ಬಂದ್ ಮಾಡಿ ಶಾಂತಿಯುತ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ.

About The Author

Leave a Reply