

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಗೊಳಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಇದೇ ಆ. 15ರಿಂದ ಪ್ಲಾಸ್ಟಿಕ್ ನಿಷೇಧಿಸುವಂತೆ ಆದೇಶ ಹೊರಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಲಾಗಿದೆ ಎಂದರು.






