November 9, 2025
WhatsApp Image 2025-08-15 at 1.08.41 PM (1)

ಬಂಟ್ವಾಳ: ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಛೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯವನ್ನು ಪಡೆದಿದ್ದೇವೆ. ಆದರೆ ಫ್ಯಾಸಿಸ್ಟ್ ಕಪಿಮುಷ್ಠಿಯಿಂದ ಭಾರತ ಇನ್ನೂ ಸ್ವತಂತ್ರಗೊಂಡಿಲ್ಲ. ಸ್ವಾತಂತ್ರ್ಯವನ್ನು ರಕ್ಷಿಸಿ ರಾಷ್ಟ್ರವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಅಡ್ವಕೇಟ್ ಕಬೀರ್, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್ ಎಚ್, ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಜೊತೆ ಕಾರ್ಯದರ್ಶಿ ಇರ್ಫಾನ್ ಕಾವಳ್ಕಟ್ಟೆ, ಉಪಾಧ್ಯಕ್ಷ ಇಕ್ಬಾಲ್ ಇಝಾನ್,
ಬಂಟ್ವಾಳ ಪುರಸಭೆ ಕೌನ್ಸಿಲರ್ ಇದ್ರಿಸ್ ಪಿ ಜೆ, ಬಂಟ್ವಾಳ ಪುರಸಭೆ ಸಮಿತಿ ಅಧ್ಯಕ್ಷ ಶರೀಫ್ ವಳವೂರು, ಬಿಸಿ ರೋಡ್ ಸಿಟಿ ಮುನ್ಸಿಪಲ್ ಸಮಿತಿ ಅಧ್ಯಕ್ಷ ಬಶೀರ್ ಪಲ್ಲ ಉಪಸ್ಥಿತರಿದ್ದರು.

About The Author

Leave a Reply